ಬೆಂಗಳೂರು : ಹೊಸ ವರ್ಷದ 3ನೇ ತಿಂಗಳು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಹೌದು, ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ದರದ ಬೆಲೆ ಏರಿಕೆಯಾಗಿದೆ. ಮಾರ್ಚ್ 1 ರ ಶುಕ್ರವಾರದಿಂದಲೇ ಜಾರಿಗೆ ಬರುವಂತೆ 19 ಕೆ.ಜಿ,ಯ ವಾಣಿಜ್ಯ ಸಿಲಿಂಡರ್ ಗಳ ಬೆಲೆ 25 ರೂ. ಏರಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಪ್ರತಿ ತಿಂಗಳ ಮೊದಲ ದಿನವೇ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಆಗುತ್ತದೆ. ಈ ಬಾರಿ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಏರಿಕೆಯಾಗಿದೆ. ಅಲ್ಲದೇ,ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಶುಕ್ರವಾರದಿಂದಲೇ ಸಿಲಿಂಡರ್ ಗೆ ಹೆಚ್ಚು ಹಣ ಪಾವತಿ ಮಾಡಬೇಕಿದೆ.
ಎಲ್ಲಿ?ಎಷ್ಟು?
ಇಂದಿನಿಂದ ವಾಣಿಜ್ಯ ಬಳಕೆ ಎಲ್ ಪಿ ಜಿ ಸಿಲಿಂಡರ್ ದೆಹಲಿಯಲ್ಲಿ 1,769.50 ರೂ. ಇದ್ದ ಬೆಲೆ 1795 ರೂ. ಏರಿಕೆ ಕಂಡಿದೆ. ಕೋಲ್ಕತ್ತಾದಲ್ಲಿ 1,887ರ ಬದಲಿಗೆ 1,911 ರೂ.ಗೆ ಲಭ್ಯವಾಗಲಿದೆ.ಮುಂಬೈನಲ್ಲಿ 1,749 ರೂ., ಹಾಗೂ ಚೆನ್ನೈನಲ್ಲಿ 1,960 ರೂ.ಗೆ ಲಭ್ಯವಾಗಲಿದೆ. ದೇಶೀಯ ಗ್ಯಾಸ್ ಸಿಲಿಂಡರ್ ದೆಹಲಿಯಲ್ಲಿ 903 ರೂ. ಮತ್ತು ಕೋಲ್ಕತ್ತಾದಲ್ಲಿ 929 ರೂ., ಮುಂಬೈನಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಗೆ ಹೆಚ್ಚಳ ಕಂಡಿದೆ.