March 1, 2026
WhatsApp Image 2026-03-01 at 3.05.49 PM

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ.

ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು.

ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ.

ಮೃತದೇಹವನ್ನು ಕುಂದಾಪುರಧ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.