March 4, 2026
WhatsApp Image 2024-06-01 at 5.50.38 PM

ಬೆಳ್ತಂಗಡಿ: ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ನಾಪತ್ತೆಯಾದ ವಿದ್ಯಾರ್ಥಿಯನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತಿದ್ದ ಬೇಲೂರಿನ ದಿವ್ಯಾ. ಎಸ್, ಎಂದು ಗುರುತಿಸಲಾಗಿದೆ.ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. 

ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.