
ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಸ್ಕೂಟರ್ ಸವಾರ ಪುತೂರಿನ ಮನ್ಸೂರ್‌ಗೆ ನವೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅ. 30ರಂದು ಬಿಸಿಲೆ ಘಾಟ್‌ನಲ್ಲಿ ನಡೆದ ಅಪಘಾತದ ಗಾಯಾಳುವನ್ನು ಅಂಬ್ಯುಲೆನ್ಸ್ನಲ್ಲಿ ಸಾಗಿಸುತ್ತಿದ್ದ ವೇಳೆ ಸ್ಕೂಟರ್ ಸವಾರ ಮನ್ಸೂರ್ ಸಂಚಾರಕ್ಕೆ ಅಡ್ಡಿಸಿದ್ದ. ಸೈರನ್ ಶಬ್ದ ಕೇಳಿಯೂ ದಾರಿ ಬಿಡದೇ ಅಡ್ಡಲಾಗಿ ಸ್ಕೂಟರ್ ಚಲಾಯಿಸಿ ವಿಕೃತಿ ಮೆರೆದಿದ್ದ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿತ್ತು. ಆರೋಪಿ ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ. 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
