
ಬ್ಯಾಂಕ್ ಹಾಗೂ ಕಾರ್ಡ್ ದಾಖಲಾತಿಗಳನ್ನು ಕಳುಹಿಸಿದ್ದರು. ಆಗ ಅವರು ಪ್ರಾಂಚೈಸ್ ಅರ್ಜಿ ಸಲ್ಲಿಕೆ ಆಗಿರುವುದಾಗಿ ತಿಳಿಸಿದ್ದು, ಆರೋಪಿಗಳು ತಿಳಿಸಿದಂತೆ ಅವಿನಾಶ್ ರಿಜಿಸ್ಟೇಷನ್, ಪ್ರೋಡಕ್ಟ್ ಬುಕಿಂಗ್‌ಗೆ ಹಂತ ಹಂತವಾಗಿ ೫,೭೨,೫೦೦ರೂ. ಹಣವನ್ನು ಅಪರಿಚಿತರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದರು.
ಆರೋಪಿತರು ಮತ್ತೆ ಮತ್ತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದು, ಇದರಿಂದ ಅವಿನಾಶ್ ಸಂಶಯ ಉಂಟಾಯಿತು. ಆರೋಪಿಗಳು ಕ್ಯಾಂಪಾ ಕೋಲಾ ಪ್ರಾಂಚೈಸಿಯನ್ನು ಕೊಡುವುದಾಗಿ ನಂಬಿಸಿ ಒಟ್ಟು ೫,೭೨,೫೦೦ರೂ. ಹಣ ಪಡೆದುಕೊಂಡು ವಂಚಿಸಿರುವುದಾಗಿ ಅವಿನಾಶ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್ ತಂಡ, ಬಿಹಾರ ರಾಜ್ಯದ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
