January 7, 2025
WhatsApp Image 2023-01-02 at 5.35.24 PM
ರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್, ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋಗಳನ್ನು ಹಲವರು ಹಂಚಿಕೊಂಡಿದ್ದಾರೆ. ಆದರೆ, ಯಾವ ರೀತಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನುವುದು ಸಸ್ಪೆನ್ಸ್.

About The Author

Leave a Reply

Your email address will not be published. Required fields are marked *

You cannot copy content of this page.