March 4, 2026
WhatsApp Image 2026-01-02 at 9.23.26 AM

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ.

ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ.

ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.