ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಯುವಕ ನಾಪತ್ತೆ

ಸುಳ್ಯ: ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ನಡೆದಿದೆ.

ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಳಿಕ ಈ ವಿ‍ಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದಾನೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Check Also

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ …

Leave a Reply

Your email address will not be published. Required fields are marked *

You cannot copy content of this page.