May 31, 2025 1:16:46 PM
WhatsApp Image 2023-11-02 at 1.51.52 PM

ಉಡುಪಿ: ಟ್ರಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ಸಂಭವಿಸಿದೆ. ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಹೆದ್ದಾರಿ ಸಮೀಪದ ರಸ್ತೆಯ ಬದಿಯಲ್ಲಿರುವ ಮಣ್ಣು ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಸಂಜೀವ ಅವರಿಗೆ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>