ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಪುತ್ತಿಲಗೆ ಸರಿಯಾಗೇ ಟಾಂಗ್ ಕೊಟ್ಟಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ ನಿಷ್ಠೆ ಮುಖ್ಯ ಎಂದು ಹೇಳಿದ್ದಾರೆ.
ನಾವು ಯಾರೂ ಪಕ್ಷಕ್ಕಿಂತ ದೊಡ್ಡವರಲ್ಲ, ಪಕ್ಷವೇ ದೊಡ್ಡದು. ನಾವು ವೈಯುಕ್ತಿಕವಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಅಂತ ಹೊರಟಿದ್ದರೆ ಮೈಸೂರಲ್ಲಿ ನಾನೂ ಶಕ್ತಿ ಪ್ರದರ್ಶನ ಮಾಡುತ್ತಿದೆ. ಸಂಘಟನೆಯೇ ಸೆಟೆದು ನಿಂತು ಒಬ್ಬ ವ್ಯಕ್ತಿಯ ಪರವಾಗಿ ನಿಂತ ಕ್ಷೇತ್ರ ಇದರೆ ಅದು ಪುತ್ತೂರು. ಅಷ್ಟು ಪ್ರೀತಿ ವಿಶ್ವಾಸವನ್ನ ನೀವು ಕಾರ್ಯಕರ್ತರ ಜೊತೆ ಬೆಳೆಸಿಕೊಂಡಿದ್ದೀರಿ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ವೇದಿಕೆ ಹತ್ತದೆ ಸಾಮಾನ್ಯ ಕಾರ್ಯಕರ್ತರ ಜೊತೆ ಕುತಿದ್ದರು. ಆದರೆ ಪ್ರತಾಪ್ ಸಿಂಹ ಅವರನ್ನು ವೇದಿಕೆಗೆ ಕರೆದು ಅವರನ್ನು ಕುರಿಸಿದ್ದರು, ಬಳಿಕ ತಮ್ಮ ಭಾಷಣದಲ್ಲಿ ಪುತ್ತಿಲರಿಗೆ ಪಕ್ಷ ನಿಷ್ಠೆಯ ಪಾಠ ಮಾಡಿದ್ದಾರೆ.