
ಮಂಗಳೂರು: ರಾಜ್ಯ ಸರಕಾರ ಮಂಗಳವಾರ ತಡರಾತ್ರಿ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ ಬಿ ರಿಷತ್ ಅವರನ್ನು ಬೆಂಗಳೂರು ವಯರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಗೊಳಿಸಿದೆ.
ರಿಷಂತ್ ಅವರ ಸ್ಥಾನಕ್ಕೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ಎನ್ ಅವರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
