ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದ ಸುಮಾರು ಒಂದುವರೆ ಕಿ.ಮೀ ದೂರದ ನಾರಡ್ಕ ಎಂಬಲ್ಲಿ ದಟ್ಟ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂದೀಪ್ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಪ್ರತೀಕ್ ಆತನನ್ನು ಕೊಲೆ ಮಾಡಿದ್ದಾನೆ ಎಂಬ ವಿಷಯ ನಿನ್ನ ಎಲ್ಲೆಡೆ ಹರಡಿತ್ತು. ಆದರೆ ಶವ ಪತ್ತೆಯಾಗಿರಲಿಲ್ಲ ಈ ಸಂಬಂಧ ಇಂದು ಗ್ರಾಮಸ್ಥರು ಪೊಲೀಸರನ್ನು ತರಾಟೆ ತೆಗೆದುಕೊಂಡು ಪ್ರತಿಭಟನೆ ಮಾಡಿದ್ದರು ಅಲ್ಲದೆ ಹಲವು ಮುಖಂಡರು ಠಾಣೆಗೆ ಭೇಟಿ ನೀಡಿದ್ದರು.
ಇದೀಗ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.