

ಬೆಳ್ತಂಗಡಿ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡು ರಿಕ್ಷಾ ಚಾಲಕ ಗಂಭೀರಗಾಗಿ ಗಾಯಗೊಂಡ ಘಟನೆ ವೇಣೂರು ಗ್ರಾಮದ ಕುಂಭಶ್ರೀ ಶಾಲೆಯ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ನೌಶದ್ ಎಂದು ಗರುಉತಿಸಲಾಗಿದೆ.
ಕಾರು ಚಾಲಕ ಅತೀ ವೇಗದಲ್ಲಿ ಕಾರನ್ನು ಚಲಾಯಿಸಿ ಲಾರಿಯೊಂದನ್ನು ಓವರ್ ಟೇಕ್ ಮಾಡಿ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.