
ಭಟ್ಕಳ: ಇಲ್ಲಿನ ಶಿರಾಲಿ ಅಳ್ವೆಕೋಡಿ ಸಮುದ್ರದಲ್ಲಿ ದೋಣಿ ದುರಂತದಿಂದ ನೀರುಪಾಲಾಗಿದ್ದ ನಾಲ್ವರ ಪೈಕಿ ಇಬ್ಬರ ಮೃತದೇಹ ಈಗಾಗಲೇ ಸಿಕ್ಕಿದ್ದು ಇನ್ನಿಬ್ಬರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆ ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿ ದಿನ ದೂಡುತ್ತಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಯ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಆರು ಜನ ನೀರು ಪಾಲಾಗಿದ್ದರು. ಇಬ್ಬರು ಈಜಿ ದಡ ಸೇರಿದ್ದರು.
ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮೀನುಗಾರರ ಪತ್ತೆಗಾಗಿ ಎಲ್ಲಾ ರೀತಿಯ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇವರ ಕುಟುಂಬ ಮಾತ್ರ ಸದ್ಯ ಆತಂಕದಲ್ಲಿದೆ.
