ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಡುಪಿ: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ ಒದಗಿಸಲು ಅವಕಾಶವಿದೆ.

ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.

ಯೋಜನೆಯಡಿ ಅನುಮತಿಸಿದ ಸಾರ್ವಜನಿಕ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿದ್ದು, ವೈಯಕ್ತಿಕ ಕಾಮಗಾರಿಗಳಲ್ಲಿ ಉದಾಹರಣೆಗೆ ಮುಖ್ಯವಾಗಿ ದನದ ಕೊಟ್ಟಿಗೆ, ಕುರಿ, ಕೋಳಿ, ಹಂದಿ ಶೆಡ್‌ಗಳು, ಎರೆಹುಳು ತೊಟ್ಟಿ, ವಸತಿ ಯೋಜನೆಯಡಿ ಮಂಜೂರಾದ ಮನೆಗಳ ನಿರ್ಮಾಣ, ಮೀನು ಒಣಗಿಸುವ ಕಣ, ಕೃಷಿ ಹೊಂಡ, ಕೃಷಿ ಬಾವಿ ಮತ್ತು ಕೃಷಿ ಜಮೀನಿಗೆ ಸಂಬAಧಿಸಿದ ಇತರೆ ಕಾಮಾಗಾರಿಗಳು, ಇಂಗು ಗುಂಡಿ ನಿರ್ಮಾಣ ಹಾಗೂ ತೋಟಗಾರಿಕಾ ಕಾಮಗಾರಿಗಳಾದ ಅಡಿಕೆ ತೋಟ ನಿರ್ಮಾಣ, ಪೌಷ್ಟಿಕ ತೋಟ ಮತ್ತು ಮುಂತಾದ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿರುತ್ತದೆ.

ಸಾರ್ವಜನಿಕರು ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಯೋಜನೆಯಡಿ ಕೆಲಸ ಪಡೆಯಲು ಸಮೀಪದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಿ, ರೈತರು ಹಾಗೂ ಸಾರ್ವಜನಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.