ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ.