ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ; ಸಂತ್ರಸ್ಥೆಯ ರಕ್ಷಣೆ, ಇಬ್ಬರ ಬಂಧನ

ಉಡುಪಿ : ಉಡುಪಿ ಹಳೆ KSRTC ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್‌ ಸಾಲಿಯಾನ್‌ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್‌ ಎಸ್‌ (42) ಬಂಧಿತರು‌.

ಉಡುಪಿ ಹಳೆ ಕೆ ಎಸ್‌ ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಎನ್ನುವರನ್ನು ಬಂಧಿಸಿದ್ದು ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 ರೂ. ನಗದು, ಹಾಗೂ ಇತರೆ ಸಾಕ್ಷ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶೇಖರ್, ಜಯಂತ್ ಮತ್ತು ದಿನೇಶ್ ಎನ್ನುವ ಆರೋಪಿಗಳು ಸಂತ್ರಸ್ತ ಮಹಿಳೆಯನ್ನು ಲಾಡ್ಜ್ ರೂಮಿನಲ್ಲಿರಿಸಿ ಹಣಕ್ಕಾಗಿ ವೇಶ್ಯವಾಟಿಕೆ ನಡೆಸಿ ಈ ಹಣದಿಂದ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ತಿಳಿದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ‌.

Check Also

ಬಿಜೆಪಿಯ ಉಚ್ಚಾಟನೆಗೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ : ರಘುಪತಿ ಭಟ್

ಉಡುಪಿ: ಬಿಜೆಪಿಯಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯಿಂದ ನನಗೆ ಈವರೆಗೆ ಯಾವುದೇ ನೋಟಿಸ್ …

Leave a Reply

Your email address will not be published. Required fields are marked *

You cannot copy content of this page.