ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್‌ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತಕ್ಕೆ ಒಳಗಾದ 3 ಕಾರುಗಳ ಪೈಕಿ ಒಂದು ಕಾರು ನೋಂದಣಿಯಾಗದ ಹೊಚ್ಚಹೊಸ ಕಾರು ಆಗಿದ್ದು, ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿದೆ.
ಹಾಗೂ ಇತರ ಎರಡು ಕಾರು ಹಾಗೂ ಲಾರಿಗೂ ಹಾನಿಯಾಗಿದೆ. ಅಪಘಾತ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ