ಉಡುಪಿ : ಸಿಎಂ ಉಪಸ್ಥಿತಿಯಲ್ಲಿ ಇಂದು ವಿಶೇಷ ಸಭೆ ಆಯೋಜನೆ -ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ತಿಳಿಸಿದ್ದಾರೆ.

ಇಂದು ಸಂಜೆ.5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ-313ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ, ಗಣಿ ಮತ್ತು ಭೂ ವಿಜ್ಞಾನ ಸಚಿವರು ಎಸ್.ಎಸ್.ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಹ ಭಾಗವಹಿಸುವರು.

Check Also

ಉಡುಪಿ: ವ್ಯಕ್ತಿಯನ್ನು ಅಪಹರಣ ಮಾಡಿ, ಚಾಕು ತೋರಿಸಿ ಲಕ್ಷ ರೂ. ಹಣ ಲೂಟಿ

ಮಣಿಪಾಲ: ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ …

Leave a Reply

Your email address will not be published. Required fields are marked *

You cannot copy content of this page.