ಸುಬ್ರಹ್ಮಣ್ಯ: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕ- ಹುಡುಗನಿಗೆ ಹಿಗ್ಗಾ ಮುಗ್ಗಾ ಥಳಿತ

ಸುಬ್ರಹ್ಮಣ್ಯ:  ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ.

ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ.

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.