ಮಂಗಳೂರು: ಯುವನಿಧಿ ಯೋಜನೆ: ಜ.8, 9ರಂದು ನೋಂದಣಿ – ಜಿಲ್ಲಾಧಿಕಾರಿ

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.

ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 8 ಮತ್ತು 9 ರಂದು ನೋಂದಣಿ ಮೇಳವನ್ನು ನಡೆಸಲು ಅವರು ತಿಳಿಸಿದರು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿಯೇ ನೋಂದಣಿ ಅಭಿಯಾನ ನಡೆಸುವಂತೆ ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಎ.ಎಂ. ಖಾನ್, ಮತ್ತಿತರರು ಉಪಸ್ಥಿತರಿದ್ದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.