ವಿಟ್ಲ: ಇತಿಹಾಸ ಪ್ರಸಿದ್ಧ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.6 ರಿಂದ 16 ರವರೆಗೆ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ನಡೆಯಲಿದೆ.
ವಿವಿಧ ವೈದಿಕ,ತಾಂತ್ರಿಕ,ಧಾರ್ಮಿಕ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ,ಶ್ರೀ ಧಾಮ ಮಾಣಿಲದ ಪರಮಪೂಜ್ಯ ಯೋಗಿ ಕೌಸ್ತುಭ ಕರ್ಮಯೋಗಿ ಶ್ರೀ ಶ್ರೀ ಶ್ರೀ ಮೊಹನದಾಸ ಪರಮಹಂಸ ಸ್ವಾಮೀಜಿ, ಹಾಗೂ ಶ್ರೀ ಚಾಮುಂಡೇಶ್ವರೀ ದೇವಿ ಸನ್ನಿಧಿ ಕಣಿಯೂರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಇವರು ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ.