March 6, 2026
WhatsApp Image 2026-03-06 at 5.42.01 PM

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಮುರುಗನ್ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದ್ದಾರೆ.

 

 

2022ರ ಮಾ.19ರಂದು ರಾತ್ರಿ 9:45ಕ್ಕೆ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯಲ್ಲಿ ಉಲ್ಲಂಜೆ ಎಂಬಲ್ಲಿನ ಹರೀಶ್ ಸಾಲ್ಯಾನ್ (47) ಎಂಬಾತನನ್ನು ಹಣಕಾಸಿನ ದ್ವೇಷದಿಂದ ಮುರುಗನ್ ಕೆಂಪುಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಸಿಐ ಕುಸುಮಧರ್ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಎಸ್ಸೈ ಸಂಜೀವ್ ಸಹಕರಿಸಿದ್ದರು. ಸರಕಾರದ ಪರವಾಗಿ ಜ್ಯೋತಿ ಪ್ರಮೋದ್ ನಾಯಕ್ ವಾದಿಸಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.