ಮಂಗಳೂರು: ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗಾಗಿ ನಗರದ ನಗರ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹಾಗೂ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಶಾಸಕ ವೇದವ್ಯಾಸ ಕಾಮತ್ ಹಾಗೂ ಕಾಂಗ್ರೆಸ್ ಮುಖಂಡ ಜೆ.ಆರ್.ಲೋಬೊ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.
ಭಾನುವಾರವೂ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆ ಎದುರು ಜಮಾಯಿಸಿದ್ದರು.
ಜಿಲ್ಲಾ ಆರೋಗ್ಯ ಇಲಾಖೆಯ ತಂಡವು ವಿದ್ಯಾರ್ಥಿನಿಯರು ವಾಸವಿದ್ದ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದೆ. ಅಸ್ವಸ್ಥಗೊಳ್ಳಲು ಕಾರಣ ಏನೆಂದು ಪರಿಶೀಲಿಸಲಿದೆ’ ಎಂದು ಡಾ. ಜಗದೀಶ್ ತಿಳಿಸಿದ್ದಾರೆ