ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ

ಉಡುಪಿ ಜಿಲ್ಲೆಯ  ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ  ಬೇಧಿಸಿದ್ದಾರೆ.

ಬ್ಯಾಂಕು, ಸೊಸೈಟಿಗಳಲ್ಲಿ ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಕೇವಲ ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು ಆತನ ಪತ್ನಿಯ ಚಿನ್ನಾಭರಣ ಸಾಲದ ವಂಚನೆ ಪ್ರಕರಣವು ಬೆಳಕಿಗೆಬಂತು. ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ-ಅಧೀಕ್ಷಕ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರ ನಿರ್ದೇಶನದಂತೆ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಎಂ. ಎಸ್. ಹಾಗೂ ಅವರ ಸಿಬಂದಿಗಳು ಪ್ರಕರಣವನ್ನು ಬೇಧಿಸಿದ್ದು ಇನ್ನಷ್ಟು ತನಿಖೆ ಮುಂದುವರಿಸಿದ್ದಾರೆ.

Check Also

ಉಡುಪಿ: ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ …

Leave a Reply

Your email address will not be published. Required fields are marked *

You cannot copy content of this page.