ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸುಟ್ಟು ಕರಕಲಾದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಕುಂದಾಪುರದ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ.
ಅಗ್ನಿ ಅವಘಡದಿಂದ ಸ್ಪೇರ್ ಪಾರ್ಟ್ಸ್ ಅಂಗಡಿ ಅದೇ ಕಟ್ಟಡದಲ್ಲಿದ್ದ ಮಿಲ್ಕ್ ಪಾರ್ಲರ್ ಸುಟ್ಟು ಕರಕಲಾಗಿದೆ. ಜೊತೆಗೆ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿದ್ದ ಬಿಡಿಭಾಗಗಳು, ಟಯರ್, ಆಯಿಲ್ ಡಬ್ಬಗಳು ಸೇರಿ ಹಲವು ವಸ್ತುಗಳ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಮಿಲ್ಕ್ ಪಾರ್ಲರ್ ನಲ್ಲಿದ್ದ ಉತ್ಪನ್ನಗಳು ಫ್ರಿಡ್ಜ್ ಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡ ಸಂಭವಿಸಿದ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿಯು ಹತೋಟಿಗೆ ಬಾರದ ಹಿನ್ನೆಲೆ ಅಗ್ನಿಶಾಮಕಕ್ಕೆ ಮಾಹಿತಿ ನೀಡಲಾಯಿತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಯಿತು.