ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ.
ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹೇಮಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.