April 20, 2026
WhatsApp Image 2026-02-08 at 11.21.35 AM

ಬಜಪೆ: ಸಂಬಂಧಿಕರ ಮನೆಯಿಂದಲೇ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಳವಾರು ಚರ್ಚ್ ಬಳಿಯ ನಿವಾಸಿ ಅಬ್ದುಲ್‌ ನಾಸರ್ ಅಲಿಯಾಸ್ ನಾಸಿರ್‌ ಅಲಿಯಾಸ್ ನಾಚಿ (31) ಹಾಗೂ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್‌ ಅಲಿಯಾಸ್ ಇಮ್ಮು(37) ಎಂದು ಗುರುತಿಸಲಾಗಿದೆ.

2025ರ ಸೆಪ್ಟೆಂಬರ್ 23ರಂದು ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರು ತನ್ನ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ಹೋದಾಗ ರಾತ್ರಿ ಮನೆಯಲ್ಲಿದ್ದ ಸುಮಾರು 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1,25,000/- ರೂಪಾಯಿ ನಗದು ಹಣ ಕಳ್ಳತನವಾಗಿತ್ತು.

ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 176/2025 ಕಲಂ ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ನಾಸಿರ್ ಕಳ್ಳತನಗೈದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದ. ಪೊಲೀಸರು ಲುಕೌಟ್‌ ನೊಟೀಸ್‌ ಹೊರಡಿಸಿ ಆತನನ್ನು ಬಂಧಿಸಿದ್ದಾರೆ.

ಬಳಿಕ ಆತನ ವಿಚಾರಣೆ ನಡೆಸಿದ ವೇಳೆ ಮೊಹಮ್ಮದ್ ಷರೀಫ್ ರವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ತಾನು ಸೇರಿ ಈ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ.

ಆರೋಪಿತರಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ 222 ಗ್ರಾಂ ತೂಕದ ಚಿನ್ನವನ್ನು, 20,000 ರೂಪಾಯಿ ನಗದು ಹಣ, ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

About The Author

Leave a Reply

Your email address will not be published. Required fields are marked *

You cannot copy content of this page.