ಉಡುಪಿ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ನಲ್ಲಿ ಬುಧವಾರ ನಡೆದಿದೆ.
ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರು ಮಂದಿಯ ಯುವಕರ ಗುಂಪು ಸಮುದ್ರಕ್ಕೆ ಬಂದಿದ್ದರು. ಇವರು ಸಮುದ್ರದಲ್ಲಿ ಈಜುತ್ತಿದ್ದಾಗ ಭಾರಿ ಅಲೆಯೊಂದು ತೀರಕ್ಕೆ ಅಪ್ಪಳಿಸಿದೆ. ಪರಿಣಾಮ ಇಬ್ಬರು ಯುವಕರು ಸಮುದ್ರದ ಪಾಲಾಗಿದ್ದಾರೆ. ಬಳಿಕ ಯುವಕರನ್ನು ಜೀವರಕ್ಷಕರು ರಕ್ಷಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇನ್ನು ಅಧಿಕಾರಿಗಳು ಸಮುದ್ರ ತೀರಕ್ಕೆ ಹೋಗುವವರಿಗೆ ತೀವ್ರ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. ಜೊತೆಗೆ ನೀರಿಗೆ ಇಳಿಯುವವರು ಕೂಡ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.