
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಮಳೆ ತೀವ್ರವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.
ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ.
ಭಾನುವಾರ ಸಂಜೆಯೊಂದಲೂ ಭಾರೀ ಮಳೆ ಸುರಿದರೂ ಜಿಲ್ಲೆಯಲ್ಲಿ ರಜೆ ಘೋಷಿಸಿರಲಿಲ್ಲ. ಹಲವೆಡೆ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದುದು ಕಂಡು ಬಂದಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿ ಜಿಲ್ಲಾಡಳಿತದ ಹೆಲ್ಪ್ ಲೈನ್ 1077, 0820 – 2574802 ಸಂಪರ್ಕಿಸಲು ಜಿಲ್ಲಾಡಳಿತ ಸೂಚಿಸಿದೆ.
