ಕಾಪು: ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.
ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200 ಕೆ.ಜಿ ಯಷ್ಟು ದನದ ಮಾಂಸ, ಮಾರಕಾಯುಧ, ಇತರ ಸ್ವತ್ತು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.