ಪುತ್ತೂರು: ಸುದ್ದಿ ಮಾಹಿತಿ ಟ್ರಸ್ಟ್ ನೇತೃತ್ವದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಸಸ್ಯಜಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ.
ಸಸ್ಯ ಜಾತ್ರೆಯಲ್ಲಿ HOME GARDEN ವಿಭಾಗ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ (ಬೋನಸೈ ಮತ್ತೆ ವಿದೇಶಿ ತಳಿ ಹಣ್ಣು ಹಂಪಲು )ಡಿ.ಚಂದಪ್ಪ ಮೂಲ್ಯ ರವರಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪುತ್ತೂರಿನಲ್ಲಿ ಇದೇ ಪ್ರಥಮ ಬಾರಿಗೆ ನಡೆದ ಸಸ್ಯಜಾತ್ರೆ ಹೊಸ ಕ್ರಾಂತಿಯನ್ನುಂಟು ಮಾಡಿದೆ ಮಾತ್ರವಲ್ಲದೆ ಪುತ್ತೂರಿನಲ್ಲಿ ಚರಿತ್ರ ಸೃಷ್ಟಿಸಿದೆ.