ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ. ಕುಂಜಿಬೆಟ್ಟು, ಎ.ಎಲ್.ಎನ್.ರಾವ್ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ- 2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಮ್ಮೇಳನದ ಉದ್ಘಾಟನೆಯನ್ನು ಫೆ. 11 ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನೆರವೇರಿಸುವರು. ರಾಜ್ಯದ ವಿಧಾನ ಪರಿಷತ್ ಮತ್ತು ವಿಧಾನ ಸಭೆ ಸದಸ್ಯರುಗಳು, ಸಂಸದರು, ಸಚಿವರು ಹಾಗೂ ವಿವಿಧ ಗಣ್ಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಮಲ್ಪೆ ಶಂಕರನಾರಾಯಣ ಸಾಮಗ ವೇದಿಕೆ, ಕೆರೆಮನೆ ಶಿವರಾಮ ಹೆಗಡೆ ವೇದಿಕೆ, ಅಳಿಕೆ ರಾಮಯ್ಯ ರೈ ವೇದಿಕೆಗಳನ್ನು ಆಯೋಜಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ 75 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.