ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ.
ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮೃತ ಯುವತಿಯಾಗಿದ್ದಾಳೆ. ಡೆತ್ ನೋಟ್ ಬರೆದು ಮನೆಯ ಪಕ್ಕಾಸಿಗೆ ನೇಣು ಬಿಗಿದು ವನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.