ಉಡುಪಿ: ನೆರೆಗೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕದಳ ಸಿಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.