December 6, 2025
WhatsApp Image 2025-10-09 at 9.43.46 AM

ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾ‌ರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ.

ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು ಸಾಬೀತಾಗಿದ್ದು, ಒಟ್ಟು ರೂ. 29,000/- ದಂಡ ಪಾವತಿಸಲು ಆದೇಶ ಹೊರಡಿಸಿದ್ದಾರೆ.ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವುದು ರಸ್ತೆ ಅಪಘಾತಗಳಿಗೆ ಕಾರಣವಾಗುವ ಗಂಭೀರ ತಪ್ಪು ಎಂದು ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದ್ದು, ಇಂತಹ ಕೃತ್ಯಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

About The Author

Leave a Reply

Your email address will not be published. Required fields are marked *

You cannot copy content of this page.