ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್ ಶಾರೀಕ್ ಟಾರ್ಗೆಟ್!

ಮಂಗಳೂರು: ಕದ್ರಿ ದೇವಸ್ಥಾನವೇ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್‍ನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

ಹೌದು.ಮಂಗಳೂರಿನ ಪಂಪ್‍ವೆಲ್, ರೈಲ್ವೇ ನಿಲ್ದಾಣ, ಆರ್‌ಎಸ್‌ಎಸ್ ಕಚೇರಿ ಶಾರೀಕ್‍ನ ಟಾರ್ಗೆಟ್ ಆಗಿರಬಹುದು ಎಂದು ಈ ಮೊದಲು ಅಂದಾಜಿಸಲಾಗಿತ್ತು. ಆದರೆ ಈಗ ಕದ್ರಿ ದೇವಸ್ಥಾನವೇ ಆತನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ರಾಷ್ಟ್ರೀಯ ತನಿಖಾ ದಳದ ಮೂಲಗಳಿಂದ ತಿಳಿದು ಬಂದಿದೆ.

ಎರಡೂವರೆ ತಿಂಗಳ ಚಿಕಿತ್ಸೆಯ ಬಳಿಕ ಶಾರೀಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಮಾರ್ಚ್ 6 ರಂದು ಬಿಡುಗಡೆಯಾಗಿದ್ದ. ಸದ್ಯ ಎನ್‍ಐಎ ಕಸ್ಟಡಿಯಲ್ಲಿರುವ ಶಾರೀಕ್‍ನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್‍ನಲ್ಲಿ ಬಾಂಬ್ ಇಡಲು ಪ್ಲಾನ್ ಮಾಡಿದ್ದೆ ಎಂಬ ವಿಚಾರವನ್ನು ಶಾರೀಕ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.