ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ ಅಗ್ನಿಅವಘಡ – ಅಪಾರ ನಾಶ

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ.

ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.