ಕಡಬ: ರೆಫ್ರಿಜರೇಟರ್ ಸ್ಪೋಟ- ಸುಟ್ಟು ಕರಕಲಾದ ಮನೆಯ ಉಪಕರಣ, ದಾಖಲೆ ಪತ್ರಗಳು

ಕಡಬ: ಮನೆಯಲ್ಲಿದ್ದವರು ಮನೆಯಿಂದ ಹೊರಟ ಒಂದು ಗಂಟೆಯ ಅವಧಿಯಲ್ಲಿ ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ 3 ಘಂಟೆ ಸುಮಾರಿಗೆ ನಡೆದಿದೆ.

ಮದ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರುಕ್ ಅವರು ತಹಶಿಲ್ದಾರ್ ಕಚೇರಿ ಬಳಿ ಇರುವ ತನ್ನ ಅಂಗಡಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಅವಘಡ ಸಂಭವಿಸಿದ್ದು ದೊಡ್ಡ ದುರಂತವೊಂದು ತಪ್ಪಿದೆ.

ಸುಮಾರು ಐದು ವರ್ಷಗಳ ಹಿಂದೆ ಅವರು ರೆಫ್ರಿಜರೇಟರ್ ಖರೀದಿಸಿದ್ದರು. ಎಂದಿನಂತೆ ರೆಫ್ರಿಜರೇಟರ್ ಚಾಲು ಮಾಡಿದ್ದರು.ಮನೆಯ ಸುತ್ತ ಹೊಗೆ ಕಾಣಿಸಿಕೊಂಡ ಹಿನ್ನಲೆ‌ ಸ್ಥಳೀಯರು ಸಂಶಯಗೊಂಡು ನೋಡಿದಾಗ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ. ಸ್ಥಳೀಯರು ಬೆಂಕಿ ನಂದಿಸಲು ಸಹರಿಸಿದ್ದಾರೆ.

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.