ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಘಾತದಿಂದ ನಿಧನ

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯೆನ್ಸ್ ನಲ್ಲಿ ಕರೆದೊಯ್ಯಲಾಯಿತು.ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಟೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮ್ಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ,ಸರಕಾರದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು‌. ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದ ಇವರಿಗೆ ಹಲವಾರು ರಾಜಕೀಯ ನಾಯಕರನ್ನು ಬೆಳೆಸಿದ ಕೀರ್ತಿ ಸಲ್ಲುತ್ತದೆ. ಮೃತರು ತಂದೆ ತಾಯಿ ಪತ್ನಿ ಪುತ್ರ ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.