ಬಂಟ್ವಾಳ: ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ- ನಾಲ್ವರು ಗಂಭೀರ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ.

ಪುತ್ತೂರು ‌ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಎದುರುಗಡೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು  ಇದ್ದು ಘಟನೆಯಲ್ಲಿ ಮೂರು ಮಹಿಳೆಯರು ಸೇರಿ ಆರು ಮಂದಿಗೆ ಗಾಯಗಳಾಗಿದೆ.  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದಲ್ಲಿ ಕಾರು ಹಾಗೂ ಸ್ಕೂಟರ್ ಸಂಪೂರ್ಣ ‌ಜಖಂಗೊಂಡಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.