ಉಡುಪಿ: ಅಯೋಧ್ಯೆ ರಾಮಮಂದಿರ ಸನ್ನಿಧಾನದಲ್ಲಿ ಆರ್‌ ಎಸ್‌ಎಸ್‌ ಕಾರ್ಯಕರ್ತ ಹೃದಯಾಘಾತದಿಂದ ನಿಧನ

ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ (65) ಅವರು ಅಯೋಧ್ಯೆಯಲ್ಲಿ ಬಾಲ ರಾಮನ ದರ್ಶನ ಪಡೆದ ಬಳಿಕ ಇಹಲೋಕ ತ್ಯಜಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸಕ್ತ ಸಕ್ಷಮ ಜಿಲ್ಲಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯೋಧ್ಯೆಯ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಸಂದರ್ಭದಲ್ಲಿ ನಡೆದ ಸ್ಥಳೀಯ ಶ್ರೀ ರಾಮೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಶ್ರೀ ರಾಮ ಜನ್ಮ ಭೂಮಿ ಹೋರಾಟದ ಚಿತ್ರಣವನ್ನು ನೀಡಿದ್ದ ಶಾನುಭಾಗ್, ಅಯೋಧ್ಯೆಯಲ್ಲಿ ಬಾಲ ರಾಮನ ದರ್ಶನ ಪಡೆದ ಬಳಿಕ ಇಹಲೋಕವನ್ನು ತ್ಯಜಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತತ್ವ ಸಿದ್ಧಾಂತಗಳ ಬದ್ಧತೆಯಿಂದ ಕಾರ್ಯಕರ್ತರಿಗೆ ಮಾದರಿಯಾಗಿದ್ದ ಪಾಂಡುರಂಗ ಶಾನುಭಾಗ್ ರವರು ಉಡುಪಿಯ ಸಿಂಡಿಕೇಟ್ ಬ್ಯಾಂಕಿನ ಕ್ಯಾಥೋಲಿಕ್ ಸೆಂಟರ್ ಶಾಖೆಯಲ್ಲಿ ಸಹಾಯಕ ಪ್ರಭಂಧಕರಾಗಿ 2018ರಲ್ಲಿ ನಿವೃತ್ತಿ ಹೊಂದಿದ್ದರು. ಸಂಘದ ಅನೇಕ ಕಾರ್ಯಕ್ರಮಗಳಲ್ಲಿ ಹಾಗೂ ಶಿಬಿರಗಳಲ್ಲಿ ಪರಿಣಾಮಕಾರಿ ವಿಷಯ ಮಂಡನೆಯೊಂದಿಗೆ ಮಾರ್ಗದರ್ಶನ ನೀಡುತ್ತಿದ್ದ ಶಾನುಭಾಗ್ ರವರು ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.