May 11, 2026
image (43)

ಮೂಡುಬಿದಿರೆ : ಕಾರ್ಕಳ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್‌ನಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ.

ಮೂಡುಮಾರ್ನಾಡು ಗ್ರಾಮದ ನಿವಾಸಿ ಗೀತಾ (54) ಮೃತ ದುರ್ದೈವಿ. ಕಾರ್ಕಳದಿಂದ ಮಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್, ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಬಸ್‌ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಸ್ಕೂಟರ್‌ನಲ್ಲಿದ್ದ ಗೀತಾ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಗೀತಾ ಅವರು ಮುಂಬೈನಲ್ಲಿ ನೆಲೆಸಿದ್ದು, ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‌ನಲ್ಲಿದ್ದ ಸುಮಾರು 16 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.