December 5, 2025
deccanherald_2024-12-19_0g7e4zs7_dead body istk

ಸುಳ್ಯ: ಮರ್ಕಂಜದ ಬೊಮ್ಮಾರು ನಿವಾಸಿ ಶೀನ ಪೂಜಾರಿ (65) ಅವರ ಶವ ಕೊಳೆತ ಸ್ಥಿತಿಯಲ್ಲಿ ಬೊಮ್ಮಾರಿನ ಬಾವಿಯೊಂದರಲ್ಲಿ ವ್ಯಕ್ತಿಯೊಬ್ಬರ ಪತ್ತೆಯಾಗಿದೆ.

ಕೆಲವು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ ಅವರು ಕಳೆದ ಏಳೆಂಟು ದಿನಗಳಿಂದ ಯಾರಿಗೂ ಕಾಣಿಸಿರಲಿಲ್ಲ.

ಸೋಮವಾರ ಪರಿಸರದಲ್ಲಿ ಕೊಳೆತ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

 

ಶೀನ ಅವರು ಕೆಲವು ವರ್ಷಗಳ ಹಿಂದೆ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾಗಿ ಜೈಲುವಾಸ ಅನುಭವಿಸಿ ಬಂದಿದ್ದರು. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.