December 13, 2025
WhatsApp Image 2025-11-11 at 2.23.12 PM

ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಕಾರ್ಕಳದ ನಲ್ಲೂರುವಿನ ಮನೆಯೊಂದಕ್ಕೆ ಕಾರ್ಕಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ರಪ್ ಅಲಿ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಮಾಹಿತಿಯ ಮೇರೆಗೆ ಕಾರ್ಕಳ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 60 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದ್ದು, ಒಂದು ಎತ್ತುವನ್ನು ಕಟ್ಟಿ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬ0ಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.