February 12, 2026
WhatsApp Image 2026-02-12 at 9.37.30 AM (1)

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.