ಮಂಗಳೂರು: ದಕ್ಷಿಣ ಕನ್ನಡ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಈಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ತೀವ್ರ ಭಾವುಕರಾಗಿ ಮಾತನಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವರಿಷ್ಠರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಡ್ತಾರೆ.
ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ವರಿಷ್ಠರು ನಮಗೆ ಏನು ಮಾಡಲು ಹೋಳುತ್ತಾರೋ ಅದನ್ನು ಮಾಡುತ್ತೇವೆ. ಗುಡಿಸು ಎಂದರೆ ಗುಡಿಸುತ್ತೇವೆ, ಒರೆಸು ಎಂದರೆ ಒರೆಸುತ್ತೇವೆ ಎನ್ನುತ್ತಾ ಭಾವುಕರಾದರು.
ಪಕ್ಷಕ್ಕೆ ಹೊಸಬರು ಬರುತ್ತಿರಬೇಕು, ಬದಲಾವಣೆ ಆಗುತ್ತಿರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.