March 14, 2026
WhatsApp Image 2023-02-13 at 3.28.37 PM

ಕಡಬ : ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗುವೊಂದು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.