ಉಡುಪಿ : ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಸಾಧು ಪಾಣಾರ ಅವರು ಕಳೆದ 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು. ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ. ಅವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ. ಸಾಧು ಪಾಣಾರ ಅವರು ಪತ್ನಿ ವಸಂತಿ ಪಾಣಾರ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪುತ್ರ ದಿನೇಶ್ ಪಾಣಾರ ತಂದೆಯ ವೃತ್ತಿಯನ್ನೇ ಮುಂದುವರೆಸುತ್ತಿದ್ದಾರೆ.