March 16, 2026
WhatsApp Image 2025-07-10 at 9.33.40 AM

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿಡಿಯೋ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

ಬಾಲಕಿಯನ್ನು ಉದ್ಯಮಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.